i
ಹರಿಯಬ್ಬೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಗೆ ಉತ್ತಮ ಫಲಿತಾಂಶ…
ಚಂದ್ರವಳ್ಳಿ ನ್ಯೂಸ್, ಹರಿಯಬ್ಬೆ:
ಹಿರಿಯೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ದಾಖಲಾತಿ ಹೊಂದಿರುವ ಹರಿಯಬ್ಬೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 74 ರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ.
ಪರೀಕ್ಷೆಗೆ ಹಾಜರಾದ 108 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸ್ನೇಹಾ ಎಂ(515), ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಚೈತನ್ಯ. ಎಂ(513) ಹಾಗೂ ಕಲಾ ವಿಭಾಗದಲ್ಲಿ ಯಶವಂತ್ ನಾಯಕ್ ಜಿ ಎಸ್(487) ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಉನ್ನತ ದರ್ಜೆದಯಲ್ಲಿ ಇಬ್ಬರು ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 45 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 22 ವಿದ್ಯಾರ್ಥಿಗಳು ಹಾಗೂ ತೃತೀಯ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಪ್ರಸಕ್ತ ಸಾಲಿನಲ್ಲಿ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ.
ಕಾಲೇಜಿಗೆ ಉತ್ತಮ ಫಲಿತಾಂಶ ನೀಡಿದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಾಚಾರ್ಯರು ,ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.