i
ರಾಜ್ಯದಲ್ಲಿ ಮುಂದಿನ ಮೂರುದಿನ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬದಲಾದ ತಾಪಮಾನದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದೆ. ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತೆ ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಚಿತ್ರದುರ್ಗದ ಹಿರಿಯೂರು ಸುತ್ತ ಮುತ್ತ, ಬೆಳಗಾವಿ, ಹಾಸನ, ವಿಜಯನಗರ, ಧಾರವಾಡ, ಮೈಸೂರು, ಗದಗ, ಚಿಕ್ಕಬಳ್ಳಾಪುರ, ಕೊಪ್ಪಳ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.