i
ವರುಣಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ರಾಜ್ಯದ ಗಮನ ಸೆಳೆದಿರುವ ವಿರೋಧ ಪಕ್ಷದ ನಾಯಕ ಸ್ಪರ್ಧಿಸಿರುವ ಮೈಸೂರಿನ ವರುಣಾ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ಆಗುವ ಮೂಲಕ ಪಕ್ಷಾಂತರ ಪರ್ವ ಮುಂದುವರೆಸಿದ್ದಾರೆ.
ಸಚಿವ ಸೋಮಣ್ಣ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಗುಡ್ಬೈ ಹೇಳಿ ಬಿಜೆಪಿ ಸೇರಿದ್ದಾರೆ.
ವರುಣಾ ಕ್ಷೇತ್ರದ ವಿವಿಧ ಸಮುದಾಯಗಳ ಕಾಂಗ್ರೆಸ್ ಮುಖಂಡರು ಸಚಿವ ವಿ. ಸೋಮಣ್ಣ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.