i
ಕೆಎಸ್ಆರ್ಟಿಸಿ ಬಸ್ನಲ್ಲಿ 65 ಲಕ್ಷ ರೂ. ಅಕ್ರಮ ಹಣ ಪತ್ತೆ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕೆಎಸ್ಆರ್ಟಿಸಿ ಬಸ್ನಲ್ಲಿ ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಣವನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಪರಾನಟ್ಟಿ ಚೆಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದ 65 ಲಕ್ಷ ರೂ ಹಣವನ್ನು ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಿ ಹಣ ಮತ್ತು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.