i
ಕೋಟೆ ನಾಡಿನ ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲು…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಅವರ ವಿರುದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಅವರು ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮ್ಯಾಸ ನಾಯಕ ಮತ್ತು ಊರು ನಾಯಕ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಭ್ಯರ್ಥಿ ತಿಪ್ಪೇಸ್ವಾಮಿ ಅವರು ಜಾತಿ ಹೆಸರಲ್ಲಿ ಮತದಾರರ ಮೇಲೆ ಪ್ರಭಾವ ಬೀರಿ ಮತಯಾಚನೆ ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಅಧಿಕಾರಿ ಜಾನಕೀರಾಮ್ ದೂರು ನೀಡಿದ್ದು ದೂರು ಆಧರಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ(IPC) ಸೆಕ್ಷನ್ 171 ಮತ್ತು 125 ಆರ್ಪಿ(RP) ಕಾಯ್ದೆ(Act) ಅಡಿಯಲ್ಲಿ ದೂರು ದಾಖಲು ಮಾಡಲಾಗಿದೆ.