i
ಮೇ 9 ಮತ್ತು 10 ರಂದು ಕೆಎಸ್ಆರ್ಟಿಸಿ ಬಸ್ ಸೇವೆ ವ್ಯತ್ಯಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಚುನಾವಣೆ ಕಾರ್ಯದ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ಜಿಲ್ಲಾಡಳಿತಕ್ಕೆ ಮತ್ತು ಪೊಲೀಸ್ ಇಲಾಖೆಗೆ ನಿಯೋಜಿಸಲಾಗಿದೆ.
ಆದುದರಿಂದ ಮೇ 9 ಮತ್ತು 10 ರಂದು ನಿಗಮದ ವಾಹನಗಳ ಕಾರ್ಯಚರಣೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಸಹಕರಿಸಲು ಮತ್ತು ಅದಕ್ಕನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಬೇಕೆಂದು ಅಧಿಕೃತ ಪ್ರಕಟಣೆ ತಿಳಿಸಿದೆ.