i
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾದರಿ ಸಿಇಟಿ ಪರೀಕ್ಷೆ ನಡೆಸಿದ ಕಾಲೇಜ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾದರಿ ಸಿಇಟಿ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಾಂಶುಪಾಲ ಡಾ.ಭರತ್ ಪಿ ಬಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ಬಗ್ಗೆ ಮಾಹಿತಿ ನೀಡುವ ಹಿನ್ನಲೆಯಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಮಾದರಿ ಸಿಇಟಿ ಪರೀಕ್ಷೆಯನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಇಂತಹ ಮಾದರಿ ಪರೀಕ್ಷೆಗಳು ಸಿಇಟಿ ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಅನುಕೂಲವಾಗುತ್ತದೆ ಎಂದು ನುಡಿದರು.
ಮಾದರಿ ಸಿಇಟಿ ಪರೀಕ್ಷೆಯಲ್ಲಿ ಎಸ್ಜೆಎಂ ಸ್ವತಂತ್ರ ಪದವಿಪೂರ್ವ ಕಾಲೇಜಿನ ಮಹದೇವ್ ಕುಮಾರ್ ಎಂ, ಪ್ರಥಮ, ಕೆ ಟಿ ಸ್ಫೂರ್ತಿ ದ್ವಿತೀಯ ಸ್ಥಾನ ಗಳಿಸಿದರು. ಪರೀಕ್ಷೆಯಲ್ಲಿ ೮೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಿದ್ದರು.
ಈ ಸಂದರ್ಭದಲ್ಲಿ ವಿವಿಧ ಇಲಾಖಾ ಮುಖ್ಯಸ್ಥರು, ಕಾರ್ಯಕ್ರಮ ಸಂಯೋಜಕ ಡಾ.ಶಿವಕುಮಾರ್ ಎಸ್ ಪಿ, ಡಾ.ಲೋಕೇಶ್ ಹೆಚ್.ಜೆ, ಡಾ.ನಿರಂಜನ್ ಈ, ಪ್ರೊ.ಶಶಿಧರ್ ಎ ಪಿ, ಮುಂತಾದವರು ಉಪಸ್ಥಿತರಿದ್ದರು.