i
ಮೇ-18 ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ಪೀಕಾರ?…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರು ಮುಖ್ಯಮಂತ್ರಿ ಹುದ್ದೆಗೆ ಬಿಗಿ ಪಟ್ಟು ಹಿಡಿದಿದ್ದು ಸಿಎಂ ಆಯ್ಕೆ ಕಂಗಟ್ಟು ಆಗಿರುವ ಮಧ್ಯಯೇ ರಾಜ್ಯದ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ ದಿನಾಂಕ ನಿಗದಿ ಪಡೆಸಲಾಗಿದ್ದು, ಮೇ 18ರಂದು ಗುರುವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಎಲ್ ಪಿ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲವಾದ್ದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹೈ ಕಮಾಂಡ್ ಗೆ ಸಿಎಂ ಹುದ್ದೆ ಆಯ್ಕೆ ಹೊಣೆಯನ್ನು ಹಾಕಲಾಗಿದೆ. ಹಾಗಾಗಿ ಸಿಎಂ ಹುದ್ದೆ ಸಮಸ್ಯೆ ಶೀಘ್ರ ಇತ್ಯರ್ಥವಾಗುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಎಲ್ಲಾ ಸಮಾನ ಮನಸ್ಕ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿದ್ದು ಕರ್ನಾಟಕ ಸಚಿವ ಸಂಪುಟದ ಅಂತಿಮ ರೂಪುರೇಷೆಗಳು ಒಂದು ಅಥವಾ ಎರಡು ದಿನಗಳಲ್ಲಿ ರೂಪುಗೊಳ್ಳಲಿವೆ ಎನ್ನಲಾಗಿದೆ.