i
ಮೇ.17ರಂದು ಹಜ್ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಇದೇ ಮೇ.17ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲೆಯ 96 ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಲಸಿಕಾ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.