i
ಉಚಿತ ಲಘು ವಾಹನಾ ಚಾಲನಾ ತರಬೇತಿಗೆ ಅರ್ಜಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ದಾಂಡೇಲಿ ಹಾಗೂ ಧಾರವಾಡದ ಟಾಟಾ ಮೋಟ್ರ್ಸ ಅವರ ಜಂಟಿ ಸಹಯೋಗದಲ್ಲಿ 30 ದಿನಗಳ “ಲಘು ವಾಹನಾ ಚಾಲನಾ” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.30 ಅರ್ಜಿ ಸಲ್ಲಿಸಲು ಕೊನೆಯ ದಿನ. 20 ರಿಂದ 45 ವರ್ಷ ವಯೋಮಿತಿಯ ಯುವಕರು, ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಮೇ.30 ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ವಿಸ್ತರಣಾ ಕೇಂದ್ರ, ಹಸನಮಾಳ, ದಾಂಡೇಲಿ-581325 ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ. ಮೊಬೈಲ್ ಸಂಖ್ಯೆ 08284-298547 ಹಾಗೂ ವಾಟ್ಸಪ್ ನಂಬರ್ 9449782425 ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯು ಉಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.