i
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಮತ್ತು ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.