i
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆದ ಸಭೆ ಕರೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ದಿನಾಂಕ 18-05-2023ರ ಇಂದು ಸಂಜೆ 7ಕ್ಕೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕರೆದಿದ್ದಾರೆ.
ಸಭೆಯಲ್ಲೇ ಸಿಎಲ್ ಪಿ ನಾಯಕನನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ.
ಕಾಂಗ್ರೆಸ್ ಪಕ್ಷದ ಎಲ್ಲಾ ವಿಧಾನಸಭೆ ಸದಸ್ಯರು, ಪರಿಷತ್ ಸದಸ್ಯರಿಗೆ, ಸಂಸದರಿಗೆ ಪತ್ರ ಬರೆದು ಶಾಸಕಾಂಗ ಪಕ್ಷದ ಸಭೆಗೆ ಆಗಮಿಸುವಂತೆ ಕೆಪಿಸಿಸಿ ಅಧ್ಯಕ್ಷರು ಪತ್ರ ಬರೆದು ಆಹ್ವಾನ ನೀಡಿದ್ದಾರೆ.
ನೂತನವಾಗಿ ಆಯ್ಕೆಯಾಗಿರುವ ವಿಧಾನಸಭೆ ಸದಸ್ಯರುಗಳು, ಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ ಎಂದಿದ್ದಾರೆ.
ಇಂದಿನ ಸಿಎಲ್ ಪಿ ಮೀಟಿಂಗ್ ಗೆ ಎಲ್ಲಾ ಸದಸ್ಯರು ತಪ್ಪದೇ ಭಾಗವಹಿಸುವಂತೆ ಕೋರಿದ್ದಾರೆ.