i
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2023-24 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ವಿವಿಧ ಸಂಸ್ಥೆಗಳಲ್ಲಿನ 44 ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ: 01-07-2023 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಡೀಕೃತ ಅಂಕಗಳು ಮೆರಿಟ್, ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಡಿಪೋಮಾ ಕೋರ್ಸ್ಗಾಗಿ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) 17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)-03, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಒಟ್ಟು 44 ಆಭ್ಯರ್ಥಿಗಳಿಗೆ ಲಭ್ಯವಿದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪೋಮಾ ಸಂಸ್ಥೆಗಳಲ್ಲಿ, ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ, ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9448544074 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.
ಅರ್ಜಿಗಳನ್ನು ಆನಲೈನ್ನಲ್ಲಿ ಡೌನಲೋಡ್ ಮಾಡಿಕೊಳ್ಳಲು ಲಿಂಕ್ https://khtigadag.ac.in/