i
ಶಿವರಾಜ ತಂಗಡಿಗೆ ಸಚಿವ ಸ್ಥಾನ ನೀಡಿ : ಭೋವಿ ಶ್ರೀ ಆಗ್ರಹ…
ಚಂದ್ರವಳ್ಳಿ ನ್ಯೂಸ್, ಕೊಪ್ಪಳ:
ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೇಯಾಗಿರುವ ಶಿವರಾಜ್ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಭೋವಿ ಸಮಾಜವು ಶೈಕ್ಷಣಿಕ, ಆರ್ಥಿಕ, ರಾಜಕೀಯ, ಸಾಮಾಜಿಕವಾಗಿ ತೀರ ಹಿಂದುಳಿದ ದಲಿತ ಸಮುದಾಯವಾಗಿದ್ದು, ಅನೇಕ ಶತಮಾನಗಳಿಂದಲೂ ಶೋಷಣೆ, ಅನ್ಯಾಯ ಮತ್ತು ದೌರ್ಜನ್ಯಕ್ಕೆ ಒಳಗಾದ ಸಮುದಾಯವಾಗಿದ್ದು ಇಂತಹ ಸಮುದಾಯವನ್ನು ಮುಖ್ಯವಾಹಿನಿಗೆ ತರಬೇಕಾದರೆ ಶಿವರಾಜ್ ತಂಗಡಗಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡುವದು ಬಹಳ ಮುಖ್ಯವಾಗಿದೆ.
ಶಿವರಾಜ ತಂಗಡಿಗಿಯವರು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ 3 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಮುಖ್ಯ ಪಾತ್ರವಹಿಸಿಕೊಂಡಿದ್ದಾರೆ. ಈ ಹಿಂದೆ ಎರಡು ಬಾರಿ ಸಚಿವ ಸ್ಥಾನವನ್ನು ಯಾವುದೇ ಕಳಂಕ ಇಲ್ಲದೇ ಯಶಸ್ವಿಯಾಗಿ ನಿಭಾಯಿಸಿದ್ದು ಇವರ ಪಾರದರ್ಶಕ ಆಡಳಿತಕ್ಕೆ ಕೈಗನ್ನಡಿಯಾಗಿದೆ ಎಂದರು.
ಈ ಎರಡು ವಿಷಯಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿ ಭೋವಿ ಸಮಾಜವು ಮುಖ್ಯವಾಹಿನಿಗೆ ತರಲು ಹಾಗೂ ರಾಜ್ಯದಲ್ಲಿರುವ ಭೋವಿ ಸಮಾಜದ ಸಮಗ್ರ ಅಭಿವೃದ್ದಿಗೆ ಸಹಕರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿ.ಎಲ್.ಪಿ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಇವರಲ್ಲಿ ಈ ಮೂಲಕ ಒತ್ತಾಯಿಸಿದ್ದಾರೆ.