i
ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಇಬ್ಬರ ಸಾವು, 30 ಮಂದಿಗೆ ಗಂಭೀರ ಗಾಯ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು 30ಕ್ಕೂ ಹೆಚ್ಚಿನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಪರಸ್ಪರ ಡಿಕ್ಕಿಯಾಗಿದ್ದು, ಈ ವೇಳೆ ಲಾರಿ ಹಾಗೂ ಬಸ್ ಚಾಲಕರು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಳ್ಳಾರಿ ಸಮೀಪದ ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಸರ್ಕಾರಿ ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಬಳಿಕ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.