i
ಸಿಎಂ ಆಪ್ತ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಗಳ ನೇಮಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಸಿಎಂ ಸಿದ್ದರಾಮಯ್ಯನವರಿಗೆ ವಿವಿಧ ದರ್ಜೆಯ ಅಧಿಕಾರಿಗಳ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಸಿಎಂ ಆಪ್ತ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗೃಹ ಇಲಾಖೆ ಜೊತೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಶಶಿಕಿರಣ್ ಶೆಟ್ಟಿ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಸಿಎಂ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ.ವೆಂಕಟೇಶಯ್ಯ, ಸಿಎಂ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.