i
ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಶುಭ ಹಾರೈಸಿದರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು.
ಅಲ್ಲದೆ ತಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಸಿದ್ದರಾಮಯ್ಯ ಅವರಿಗೆ ಸಾಲು ಮರದ ತಿಮ್ಮಕ್ಕ ಕಿವಿ ಮಾತು ಹೇಳಿದ್ದಾರೆ.
ಅಷ್ಟೇ ಅಲ್ಲ ನಾಡಿನಲ್ಲಿ ಮಳೆ, ಬೆಳೆ ಆಗಿ ಸಮೃದ್ಧವಾಗಿ ಆಡಳಿತ ನಡೆಸುವಂತೆ ಆಗಲಿ ಎಂದು ತಿಮ್ಮಕ್ಕ ಶುಭ ಹಾರಿಸಿದರು.
ಅದೇ ದಾಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಲು ಮರದ ತಿಮ್ಮಕ್ಕ ಅವರನ್ನು ಕುರಿತು, ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಾಲುಮರದ ತಿಮ್ಮಕ್ಕನ ಸಾಕು ಮಗ ಬಳ್ಳೂರು ಉಮೇಶ್ ಮತ್ತಿತರರು ಇದ್ದರು.