i
ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಡಿ.ಆರ್.ಲೋಕೇಶ್ವರಪ್ಪ ನೇಮಕ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಡಿ.ಆರ್.ಲೋಕೇಶ್ವರಪ್ಪ ಅವರನ್ನು ನೇಮಕ ಮಾಡಲಾಗಿದೆ.
ಡಿ.ಆರ್.ಲೋಕೇಶ್ವರಪ್ಪ ಅವರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ ಸೂಚಿಸಿದ್ದಾರೆ.