i
ಮೃಗಾಲಯ ಹಾಗೂ ಕಾರಂಜಿ ಕೆರೆ, ಉದ್ಯಾನವನ ಸಾರ್ವಜನಿಕ ವೀಕ್ಷಣೆಗೆ ಮುಕ್ತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಪ್ರಯುಕ್ತ ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಮೃಗಾಲಯವನ್ನು ವೀಕ್ಷಿಸಲು ಅನುವಾಗುವಂತೆ ಮೇ 30 ರ ಮಂಗಳವಾರದಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ, ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.