i
ಖಾತೆ ಹಂಚಿಕೆ ಬಿಕ್ಕಟ್ಟು, ಸಚಿವ ರಾಮಲಿಂಗಾರೆಡ್ಡಿ ತೀವ್ರ ಅಸಮಾಧಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರಕ್ಕೆ ಸಾಕಷ್ಟು ಒತ್ತಡಗಳು ಕೇಳಿ ಬಂದಿದ್ದು ಹಿರಿಯ ಸಚಿವ ರಾಮಲಿಂಗಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ನೀಡುವಂತೆ ಕಾಣುತ್ತಿದ್ದು ಇದಕ್ಕೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತನಕ ಯಾರಿಗೆ ಯಾವ ಖಾತೆ ನೀಡಲಾಗುತ್ತದೆ ಎನ್ನುವ ಚರ್ಚೆಯನ್ನೇ ನಡೆಸಿಲ್ಲ. ನನಗೆ ಸಾರಿಗೆ ಖಾತೆ ನೀಡುವುದಾದರೆ ಸಚಿವ ಸ್ಥಾನವೇ ಬೇಡ ಎಂದು ತಮ್ಮ ಆಪ್ತರ ಬಳಿ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಕಂದಾಯ ಅಥವಾ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.