i
ಕಾಂಗ್ರೆಸ್ ಬಣ್ಣ ಬಯಲು, ಗ್ಯಾರೆಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್ ನಿಂದ ಜನತೆಗೆ ದೋಖಾ: ಬಸವರಾಜ ಬೊಮ್ಮಾಯಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ ಅಂತ ಜನರಿಗೆ ಭರವಸೆ ನೀಡಿ, ಈಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿರುವುದು ನೋಡಿದರೆ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ. ತಾತ್ವಿಕ ಆದೇಶದಲ್ಲಿಯೂ ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು. ಅವರ ಬಣ್ಣ ಬಯಲಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಡಾ. ಅಶ್ವತ್ಥ್ ನಾರಾಯಣ ಹಾಜರಿದ್ದರು.