i
ಭೀಕರ ರಸ್ತೆ ಅಪಘಾತ ತಾಯಿ ಮಗ ಸ್ಥಳದಲ್ಲೇ ಸಾವು…
ಚಂದ್ರವಳ್ಳಿ ನ್ಯೂಸ್, ಕೊಪ್ಪಳ:
ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳದ ಮಂಗಳಪೂರ ಬಳಿ ನಡೆದಿದೆ.
ನಿಯಂತ್ರಣ ತಪ್ಪಿದ ಮಿನಿ ಲಾರಿಯೊಂದು ಡಿವೈಡರ್ ಗೆ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದ ಪರಿಣಾಮ ಸ್ಥಳದಲ್ಲೇ ರೇಣುಕಮ್ಮ(50) ಹಾಗೂ ಪ್ರಭು(25) ಎಂಬುವ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.