i
ಸಂಪುಟ ಸಭೆಯ ನಂತರ 5 ಗ್ಯಾರಂಟಿ ಯೋಜನೆಗಳು ಜಾರಿ-ಸಿಎಂ ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದಂತ ಐದು ಗ್ಯಾರಂಟಿ ಯೋಜನೆಗಳನ್ನು ಶುಕ್ರವಾರ ನಡೆಯಲಿರುವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದೆ.
ಸಂಪುಟದಲ್ಲಿ ಸರ್ಕಾರ 5 ಗ್ಯಾರಂಟಿ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದು, ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅವರಿಂದಲೇ ಗ್ಯಾರಂಟಿ ಸ್ಕೀಂ ಘೋಷಣೆ ಜಾರಿ ಮಾಡಲಾಗುವುದು. ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆ ಜಾರಿ ಮಾಡಲಾಗುತ್ತದೆ ಎನ್ನಲಾಗಿದೆ.
ಐದು ಗ್ಯಾರಂಟಿ ಯೋಜನೆಗಳನ್ನು ಏಕಕಾಲದಲ್ಲಿ ಫಲಾನುಭವಿಗಳಿಗೆ ವಿತರಿಸಲು ಸಾಂಕೇತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ನಂತರ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎನ್ನಲಾಗಿದೆ.