i
ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದ್ದು ಇದೇ ತಿಂಗಳ ಜೂನ್ 15 ರವರೆಗೆ ಎಲ್ಲ ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶೈಕ್ಷಣಿಕ ಚಟುವಟಿಕೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಜೂನ್ 15 ರವರೆಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಾಮಾನ್ಯ ಬಸ್ ಗಳಲ್ಲಿ ಒಂದನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ತಮ್ಮ ಶಾಲಾ ಕಾಲೇಜ್ ಗಳ ಪ್ರವೇಶದ ದಾಖಲಾತಿ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
2023 -24ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಮಾನ್ಯ ಬಸ್ ಗಳಲ್ಲಿ ಶಾಲಾ-ಕಾಲೇಜು ಶುಲ್ಕದ ರಶೀದಿ ಅಥವಾ ಗುರುತಿನ ಚೀಟಿ ಅಥವಾ ಕಳೆದ ಸಾಲಿನ ಬಸ್ ಪಾಸ್ ಗಳನ್ನು ನಿರ್ವಾಹಕರಿಗೆ ತೋರಿಸಿ ಜೂನ್ 15 ರವರೆಗೆ ಉಚಿತವಾಗಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.