i
ಮೊರಾಜಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 7 ಮತ್ತು 8ನೇ ತರಗತಿ ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 7 ಮತ್ತು 8ನೇ ತರಗತಿಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳ ದಾಖಲಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 9 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ವಿವರ ಇಂತಿದೆ. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರ ಕಚೇರಿಯಲ್ಲಿ ಅರ್ಜಿ ವಿತರಣೆ ಹಾಗೂ ಅರ್ಜಿ ಸ್ವೀಕರಿಸಲಾಗುತ್ತಿದೆ. ಜೂನ್ 2 ರಿಂದ ಅರ್ಜಿ ವಿತರಿಸಲಾಗುವುದು. ಜೂನ್ 9 ಅರ್ಜಿ ಸ್ವೀಕರಿಸಲು ಕೊನೆಯ ದಿನವಾಗಿದೆ.
ಜೂನ್ 14 ರಂದು ಆಯ್ಕೆ ಪಟ್ಟಿ ಪ್ರಕಟಣೆ, ಜೂನ್ 17 ರಂದು ಆಯ್ಕೆಯಾದ ವಿದ್ಯಾರ್ಥಿಗಳ ದಾಖಲಾತಿಗೆ ಕೊನೆ ದಿನವಾಗಿದೆ.
ಪ್ರಸ್ತುತ ಜಿಲ್ಲೆಯ ವಸತಿ ಶಾಲೆಗಳಲ್ಲಿ 7 ಮತ್ತು 8ನೇ ತರಗತಿಗಳಲ್ಲಿ ಖಾಲಿ ಇರುವ ವರ್ಗದ ಸ್ಥಾನಗಳಿಗೆ ಮಾತ್ರ ಅರ್ಜಿ ಸ್ವೀಕರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.