i
ಎಲ್ಲ ವರ್ಗದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜೂನ್ 15 ಆಗಿರುತ್ತದೆ
ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ STAS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ವಿಳಾಸ http//shp.karnataka.gov.in ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ವಿದ್ಯಾರ್ಥಿಗಳ STAS ID ಯನ್ನು ಶಾಲೆಯಲ್ಲಿ ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬಹುದು ಎಂದು ಚಿತ್ರದುರ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಣೆಯಲ್ಲಿ ತಿಳಿಸಿದ್ದಾರೆ.