
ಕಾಂಗ್ರೆಸ್ ಪಕ್ಷದ ಆಡಳಿತಡಲ್ಲೇ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣ: ಶಾಸಕ ಟಿ.ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕಳೆದ ಸುಮಾರು ೫೦ ವರ್ಷಗಳ ನಿರಂತರ ಹೋರಾಟದ ನಂತರ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ವಾಣಿವಿಲಾಸ ಸಾಗರದ ಮೂಲಕ ನೀರು ಹರಿಸುವ ಕಾರ್ಯ ಯಶಸ್ವಿಯಾಗಿದೆ. ಚಳ್ಳಕೆರೆ ತಾಲ್ಲೂಕು ಸೇರಿದಂತೆ ಜಿಲ್ಲೆಯ ರೈತರಿಗೆ ನೀರಿನ ಸೌಲಭ್ಯ ಒದಗಿಸಿ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ(ಪುಟ್ಟಣ್ಣಯ್ಯ ಬಣ) ಅಬಾರಿಯಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೆನೂರು ಶಂಕರಪ್ಪ ತಿಳಿಸಿದರು.
ಅವರು, ಬುಧವಾರ ಸಂಜೆ ಶಾಸಕರ ಭವನದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ೧೦ ವರ್ಷಗಳಿಂದ ತಾಲ್ಲೂಕಿನ ರೈತರ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿದಲ್ಲದೆ, ವಿಧಾನಸೌಧದಲ್ಲೂ ರೈತರ ಸಮಸ್ಯೆಗಳ ನಿವಾರಣೆಗೆ ಸರ್ಕಾರವನ್ನು ಎಚ್ಚರಿಸಿದ ಜಿಲ್ಲೆಯ ಹ್ಯಾಟ್ರಿಕ್ ಸಾಧನೆಯ ಶಾಸಕ ಟಿ.ರಘುಮೂರ್ತಿಯವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಸಚಿವರು ರೈತರ ಸಮಸ್ಯೆಗಳ ಬಗ್ಗೆ ಸದಾಕಾಲ ಸಕರಾತ್ಮಕವಾಗಿ ಸ್ಪಂದಿಸಿ, ರೈತರ ಬದುಕು ನೆಮ್ಮದಿಯಿಂದ ಕೂಡಿದ್ದರೆ ಮಾತ್ರ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಇಂದಿಗೂ ಸಹ ರೈತರಿಗೆ ಬೆಳೆ ವಿಮೆ, ನಷ್ಟ ಪರಿಹಾರ ನೀಡುವಲ್ಲಿ ಸರ್ಕಾರ ಸೂಕ್ತ ಮಾರ್ಗದರ್ಶನಗಳನ್ನು ಅನುಸರಿಸುತ್ತಿಲ್ಲವೆಂದರು.
ಮಾಜಿ ಸಚಿವ ಪಾವಗಡದ ಪಿ.ವೆಂಕಟರಮಣಪ್ಪ ಮಾತನಾಡಿ, ರಾಜ್ಯವೂ ಸೇರಿದಂತೆ ದೇಶದಲ್ಲಿ ನೀರಾವರಿ ಸೌಲಭ್ಯಗಳಿಗೆ ಅವಕಾಶ ನೀಡಿದ್ದು, ಕಾಂಗ್ರೆಸ್ ಪಕ್ಷ ಮಾತ್ರ. ಭದ್ರಾ ಮೇಲ್ದಂಡೆ ಯೋಜನೆ ಜಾರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಿ ಜಿಲ್ಲೆಯ ರೈತರ ಬದುಕನ್ನು ಹಸನಾಗಿಸಿದೆ ಎಂದರು.
ರಾಜ್ಯ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾತನಾಡಿ, ತಾಲ್ಲೂಕಿನ ರೈತರಿಗೆ ಖಾಸಗಿ ಬೆಳೆ ವಿಮೆ ಕಂಪನಿಗಳು ಹಣ ನೀಡಲು ನಿರಾಕರಿಸಿದಾಗ ಶಾಸಕ ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದಾಗ ಶಾಸಕರ ಸೂಚನೆಯಂತೆ ಸುಮಾರು ೫೦ ಕೋಟಿ ಪರಿಹಾರ ತಾಲ್ಲೂಕಿನ ರೈತರಿಗೆ ಬಂತು ಎಂದರು. ನೀರಾವರಿ ಯೋಜನೆ ಜಾರಿಗೆ ವಿಳಂಬವಾಗದಂತೆ ಜಿಲ್ಲೆಯ ಎಲ್ಲಾ ಶಾಸಕರು ಕೈಜೋಡಿಸಿ, ಮುಖ್ಯಮಂತ್ರಿ ಬಳಿ ನಿಯೋಗವನ್ನು ಕೊಂಡ್ಯೊಯಲು ಸಹಕರಿಸಿ ಎಂದರು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ, ನಮ್ಮ ಸರ್ಕಾರ ಅವಧಿಯಲ್ಲೇ ಕ್ಷೇತ್ರದ ಎಲ್ಲಾ ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹಾಯುಸುವುದು ಮತ್ತು ಹನಿ ನೀರಾವರಿ ಪದ್ದತಿ ಜಾರಿಗೊಳಿಸುವ ಕಾರ್ಯ ಮಾಡಲಾಗುವುದು, ಅಂತರ್ಜಲ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಹಿರಿಯೂರು, ಮೊಳಕಾಲ್ಮೂರು ಕ್ಷೇತ್ರದಲ್ಲಿ ನೀರಾವರಿ ಸೌಲಭ್ಯ ಕಂಡಿದ್ದರೆ ಅದಕ್ಕೆ ಕಾಂಗ್ರೆಸ್ ಪಕ್ಷದ ಸರ್ಕಾರವೇ ಮೂಲ ಕಾರಣ. ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರೈತರ ಪರವಾಗಿ ಮಾನ್ಯ ಮುಖ್ಯಮಂತ್ರಿಗಳ ಬಳಿ ನಿಯೋಗ ಕೊಂಡ್ಯೊಯುವ ಭರವಸೆ ನೀಡಿದರು. ಈ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ರೈತ ಸಂಘದ ಮುಖಂಡರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಮತದಾರರ ವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದರೆ ಅದರಲ್ಲಿ ರೈತ ಪಾತ್ರವೂ ಸಹ ಸೇರಿದೆ ಎಂದರು.
ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರೆಕೇರಪ್ಪ, ರೈತ ಮುಖಂಡರಾದ ಹಂಪಣ್ಣ, ಶಿವಕುಮಾರ್, ಧನಂಜಯ, ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಜೆ.ಸಿ.ಶಶಿಧರ, ಬಿ.ಪಿ.ಪ್ರಕಾಶ್ಮೂರ್ತಿ, ಚೌಳೂರು ಪ್ರಕಾಶ್, ಪಿ.ತಿಪ್ಪೇಸ್ವಾಮಿ, ನಗರಸಭಾ ಸದಸ್ಯರಾದ ಬಿ.ಟಿ.ರಮೇಶ್ಗೌಡ, ಎಂ.ಜೆ.ರಾಘವೇಂದ್ರ, ಬಡಗಿಪಾಪಣ್ಣ, ಅನ್ವರ್ ಮಾಸ್ಟರ್ ಮುಂತಾದವರು ಉಪಸ್ಥಿತರಿದ್ದರು.