
ಪಿಡಿಒ ಬಂಧನ, 2 ಲಕ್ಷ ರೂ.ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ ಬಂಧನ…
ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಗಳಕುಪ್ಪೆ ಗ್ರಾಮದಲ್ಲಿ ನಡೆದಿದೆ.
ಆರೋಪಿ ಅಗಳಕುಪ್ಪೆ ಗ್ರಾಮ ಪಂಚಾಯತ್ ಪಿಡಿಒ ಎನ್. ನರಸಿಂಹಮೂರ್ತಿ ಎಂಬುವವರು ಖಾತೆ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 2 ಲಕ್ಷ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನೆಲಮಂಗಲದಲ್ಲಿ ಲೋಕಾಯುಕ್ತ ಡಿವೈಎಸ್ಪಿ ರೇಣುಕಾಪ್ರಸಾದ್ ನೇತೃತ್ವದಲ್ಲಿ ದಾಳಿ ನಡೆದಿದೆ. ಪಿಡಿಒ ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.