i
ಮೊರಾರ್ಜಿ ದೇಸಾಯಿ ವಸತಿ ಶಾಲೆ: ಜೂನ್ 10ರಂದು 6ನೇ ಪ್ರವೇಶಕ್ಕಾಗಿ ಕೌನ್ಸಲಿಂಗ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸಲಾಗಿದ್ದು, ವರ್ಗ ಮತ್ತು ಮೀಸಲಾತಿವಾರು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸ್ಥಳ ಹಂಚಿಕೆ ಮಾಡಲು ಕೌನ್ಸಲಿಂಗ್ ನಡೆಸಲು ಈಗಾಗಲೇ ಕೌನ್ಸಲಿಂಗ್ ಕರೆಪತ್ರಗಳನ್ನು ರವಾನಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳು ಚಿತ್ರದುರ್ಗದ ಬ್ಯಾಂಕ್ ಕಾಲೋನಿಯ ಅಲೆಕ್ಸಾಂಡರ್ ಬಡಾವಣೆ ಪಾರ್ಕ್ ಹತ್ತಿರದ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಇದೇ ಜೂನ್ 10 ರಂದು ಬೆಳಿಗ್ಗೆ 11 ಗಂಟೆಗೆ ಕೌನ್ಸಲಿಂಗ್ ನಡೆಯಲಿದೆ.
ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬೇಕು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ ತಿಳಿಸಿದ್ದಾರೆ.