i
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಜೂನ್ 12 ರಿಂದ 19 ರವರೆಗೆ ನಡೆಯಲಿರುವುದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ, “ಪ್ರವೇಶ ಪತ್ರ” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.