i
ಚಿತ್ರದುರ್ಗ ಸಮೀಪ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲಾರಿಗೆ ಕಾರಿನ ಮಧ್ಯ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ವಿಜಯಪುರ ಗೊಲ್ಲರಹಟ್ಟಿ ಬಳಿ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಪಟ್ಟವರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.