i
ಜೆಡಿಎಸ್ ವಿಸರ್ಜಿಸುವ ಕೆಲಸ ಏನಾಯ್ತು- ಸಚಿವ ಕೆ ಎನ್ ರಾಜಣ್ಣ…
ಚಂದ್ರವಳ್ಳಿ ನ್ಯೂಸ್, ಹಾಸನ:
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಲು ವಿಫಲವಾದರೆ ಜೆಡಿಎಸ್ ವಿಸರ್ಜಿಸುವುದಾಗಿ ಹೇಳಿದ್ದು ಆ ಕಾರ್ಯ ಏನಾಯ್ತು ಎಂದು ಕುಮಾರಸ್ವಾಮಿಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಜ್ಞಾಪಿಸುವ ಮೂಲಕ ಟಾಂಗ್ ನೀಡಿದ್ದಾರೆ.
ಹಾಸನದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಜಣ್ಣ, ಕಾಂಗ್ರೆಸ್ ಜೊತೆ ಕೈ ಜೋಡಿಸಿ ಅಧಿಕಾರ ಅನುಭವಿಸಿದ್ದ ಕುಮಾರಸ್ವಾಮಿ ಅವರು ಈಗ ಬಿಜೆಪಿಯೊಂದಿಗೆ ಕೈ ಜೋಡಿಸುತ್ತಿದ್ದಾರೆ, ಅವರ ಮಾತಿನ ಮೇಲೆ ಹಿಡಿತವಿಲ್ಲ ಎಂದು ವಾಗ್ದಾಳಿ ಮಾಡಿದರು.
ಮಧುಗಿರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ದೇವೇಗೌಡರು ಎದೆಬಡಿದುಕೊಂಡು ಕರೆ ನೀಡಿದರು ಆದರೆ ಗೌಡರಿಗೆ ಜನರು ಪ್ರಾಮುಖ್ಯತೆ ನೀಡಲಿಲ್ಲ. ಅರಸೀಕೆರೆಯಲ್ಲಿ ಕೆ.ಎಂ.ಶಿವಲಿಂಗೇಗೌಡರನ್ನು ಸೋಲಿಸಲು ಗೌಡರು ಮತ್ತು ಅವರ ಪುತ್ರರು ರಾಜಕೀಯ ತಂತ್ರಗಳನ್ನೂ ರೂಪಿಸಿದ್ದರು ಇಲ್ಲೂ ಫಲ ನೀಡಲಿಲ್ಲ ಎಂದು ವ್ಯಂಗ್ಯವಾಡಿದರು.
ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಿದ ಕಾಂಗ್ರೆಸ್ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗ ರಾಜಣ್ಣ ಅವರಿಗೆ ಒತ್ತಾಯಿಸಿದ ಪ್ರಸಂಗವು ನಡೆಯಿತು.