i
ಜುಲೈ 3ರಂದು ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನದ ಮುಂದುವರೆದ ಉಪವೇಶನವು ಜುಲೈ–3 ಸೋಮವಾರದಂದು ಅಪರಾಹ್ನ 12 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದ್ದು, ಅಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.