i
ಅರಿವು ಸಾಲ ಯೋಜನೆಯಡಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಕೇಂದ್ರೀಯ ವಿಭಾಗದಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌಧ್ಧ, ಸಿಖ್, ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದ ಸಾಲ ಸೌಲಭ್ಯಗಳನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA, Via/ CET/NEET) ಮುಖಾಂತರ ಎಂ.ಬಿ.ಬಿ.ಎಸ್, ಬಿಡಿಎಸ್, ಆಯುಷ್, ಬ್ಯಾಷುಲರ್ ಆಫ್ ಆರ್ಚ್, ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮಾ ಸೈನ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿಧ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿಯಲ್ಲಿ ಶೈಕ್ಷಣಿಕ ಸಾಲವನ್ನು ನೀಡಲಾಗುವುದು. ನಿಗಮದ ವೆಬ್ಸೈಟ್ “http://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯೊಂದಿಗೆ ತಮ್ಮ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಕೇಂದ್ರಿಯ ಜಿಲ್ಲೆ ಕೊಠಡಿ ಸಂಖ್ಯೆ ಎಫ್ ಎಫ್ –29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ಪೇಟೆ ಮುಖ್ಯ ರಸ್ತೆ, ಬೆಂಗಳೂರು-560002 ಈ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22114815 ಮತ್ತು ಹೆಲ್ಪ್ಲೈನ್ ಸಂಖ್ಯೆ: 827779990 ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.