i
ಗ್ರೂಪ್ ‘ಸಿ’ ವೃಂದದ ತಾಂತ್ರಿಕೇತರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಗ್ರೂಪ್ ‘ಸಿ’ ವೃಂದದ ತಾಂತ್ರಿಕೇತರ ವಿವಿಧ ಇಲಾಖೆಗಳ 05 ವಿವಿಧ ಪದನಾಮದ ಹುದ್ದೆಗಳ ನೇಮಕಾತಿಗಳ ಸಂಬಂಧ ಅಂತಿಮ ಆಯ್ಕೆಪಟ್ಟಿಗಳನ್ನು ಜೂನ್ 15 ರಂದು ಆಯೋಗದ ಜಾಲತಾಣ http://kpsc.kar.nic.in/Lists ನÀಲ್ಲಿ ಪ್ರಕಟಿಸಲಾಗಿದೆ.
ಕರ್ನಾಟಕ ಸರ್ಕಾರದ ಸಚಿವಾಲಯದ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿನ ಪ್ರಾರೂಪಣಾ ಸಹಾಯಕರು – 03 (02+01 ಹೈಕ), ಕರ್ನಾಟಕ ರಾಜ್ಯ ಲೆಕ್ಕಪರಿಶೋದನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು – 72 ಹೈ.ಕ, ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು –66 ಹೈ.ಕ, ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಇಲಾಖೆಯಲ್ಲಿನ ಲೆಕ್ಕ ಪರಿಶೋಧಕರು – 20 ಹೈ.ಕ, ಕೃಷಿ ಮಾರಾಟ ಇಲಾಖೆಯಲ್ಲಿನ ಮಾರುಕಟ್ಟೆ ಮೇಲ್ವಿಚಾರಕರು – 06 ಹೈ.ಕ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.