i
ಮಹಿಳೆಯರ ಬ್ಯಾಂಕ್ ಖಾತೆಗೆ ಆಗಸ್ಟ್ 17 ಅಥವಾ 18 ರೊಳಗೆ 2000 ರೂ. ಜಮಾ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಗೃಹಲಕ್ಷ್ಮಿ ಯೋಜನೆ ಜಾರಿಗೆ ಹಲವು ತಾಂತ್ರಿಕ ಸಮಸ್ಯೆಗಳ ಮಧ್ಯಯೂ ಮಹಿಳೆಯರ ಖಾತೆಗೆ ಆಗಸ್ಟ್ 17 ಅಥವಾ 18 ರೊಳಗೆ 2000 ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಗೌರಿಗದ್ದೆ ದತ್ತಾಶ್ರಮದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆ ಸರಳಗೊಳಿಸಲಾಗುವುದು ಎಂದು ಹೇಳಿದರು.
ಯೋಜನೆಯ ಫಲಾನುಭವಿಗಳು ತಂತ್ರಾಂಶದಲ್ಲಿ ಹೆಸರು ನೋಂದಾಯಿಸಲು ಅಧಿಕಾರಿಗಳು ಪೂರಕವಾದ ಅಪ್ಲಿಕೇಶನ್ ತಯಾರಿಸುತ್ತಿದ್ದು ಗೃಹಲಕ್ಷ್ಮಿ ಯೋಜನೆ ಯೋಜನೆ ಅನುಷ್ಠಾನಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆಗಸ್ಟ್ 17 ಅಥವಾ 18 ರೊಳಗೆ ಮಹಿಳೆಯರ ಖಾತೆಗೆ 2000 ರೂ. ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.