i
ಹಿಂದುಳಿದ ವರ್ಗಗಳಿಗೆ ಸೇರಿದ ನಿರುದ್ಯೋಗಿ ಕಾನೂನು ಪದವೀಧರರಿಗೆ ನ್ಯಾಯಾಂಗ ತರಬೇತಿಗೆ ಅರ್ಜಿ ಅಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ವರ್ಗ-1, 2ಎ, 3ಬಿ ವರ್ಗಕ್ಕೆ ಸೇರಿದ ನಿರುದ್ಯೋಗಿ ಕಾನೂನು ಪದವೀಧರರನ್ನು ನ್ಯಾಯಾಂಗ ತರಬೇತಿ ಯೋಜನೆಯಡಿ 2023-24 ನೇ ಸಾಲಿನಲ್ಲಿ ಆಯ್ಕೆ ಮಾಡಲು ಖಾಲಿ ಇರುವ 13 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತರು ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಭವನ, ಸ್ಟೇಡಿಯಂ ರಸ್ತೆ, ಚಿತ್ರದುರ್ಗ, ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಹಾಗೂ ನಿಗಧಿತ ನಮೂನೆಗಳನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಇರುವ ನಿಬಂಧಗಳು: ಅಭ್ಯರ್ಥಿಯು ಹಿಂದುಳಿದ ವರ್ಗಗಳ ವರ್ಗ-1, 2ಎ, 30, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಾಗಿರಬೇಕು. ಆಯ್ಕೆ ಮಾಡಲಾಗುವ ಒಟ್ಟಾರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಲ್ಲಿ ಶೇ.33.33ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗುವುದು. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹಿಂದೆ ಎರಡು ವರ್ಷಗಳಗೊಳಗಾಗಿ ಕಾನೂನು ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು ಹಿಂದುಳಿದ ವರ್ಗಕ್ಕೆ ಸೇರಿದ 2ಎ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ ಆದಾಯ ಮಿತಿ ರೂ 2,50,000 ಗಳು ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.3,50,000 ಗಳ ಆದಾಯ ಮಿತಿ ನಿಗದಿಪಡಿಸಲಾಗಿದೆ. ತರಬೇತಿ ಅವಧಿಯು ನಾಲ್ಕು ವರ್ಷಗಳಾಗಿದ್ದು, ತರಬೇತಿಯ ಅವಧಿಯಲ್ಲಿ ನಿಯಮಾನುಸಾರ ತರಬೇತಿ ಭತ್ಯೆ ಪಾವತಿಸಲಾಗುವುದು, ಆಯ್ಕೆಯನ್ನು ಜಿಲ್ಲಾ ಆಯ್ಕೆ ಸಮಿತಿಯ ಮೂಲಕ ನಡೆಸಲಾಗುವುದು. ಅಭ್ಯರ್ಥಿಯು ಕನಿಷ್ಟ ವಯೋಮಿತಿಯು ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 38 ವರ್ಷಗಳು ಮೀರಿರಬಾರದು, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ಹೆಸರು ನೋಂದಾಯಿಸಿರಬೇಕು, ನೋಂದಾಯಿಸಿಲ್ಲದ ಪಕ್ಷದಲ್ಲಿ ಆಯ್ಕೆಯಾದ ತಕ್ಷಣ ನೋಂದಾಯಿಸಿದ ಹೊರತು ಶಿಷ್ಯವೇತನ ಪಾವತಿಸಲಾಗುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಜಾತಿ ಆದಾಯ ಪ್ರಮಾಣ ಪತ್ರ ಅಥವಾ ಇತರೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿ ಆಯ್ಕೆಯಾದ ಪಕ್ಷದಲ್ಲಿ ಅಂತಹವರನ್ನು ಶಿಕ್ಷೆಗೆ ಗುರಿಪಡಿಸುವುದಲ್ಲದೆ ಶಿಷ್ಯವೇತನದ ಜೊತೆಗೆ ಶೇ.10 ರ ಬಡ್ಡಿಯನ್ನು ಭೂ ಕಂದಾಯ ಬಾಕಿ ರೂಪದಲ್ಲಿ ವಸೂಲಿ ಮಾಡಲಾಗುವುದು, ಅಲ್ಲದೇ ತರಬೇತಿಯನ್ನು ಮಧ್ಯದಲ್ಲಿ ಬಿಟ್ಟಲ್ಲಿ ಅವರು ಇಲಾಖೆಯಿಂದ ಪಡೆದ ಪೂರ್ಣ ಶಿಷ್ಯವೇತನವನ್ನು ಹಿಂದಿರುಗಿಸಬೇಕಾಗುವುದು. ಆಯ್ಕೆಯಾದ ಅಭ್ಯರ್ಥಿಗಳುನ್ನು ಜಿಲ್ಲಾ ಘಟಕ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು 20 ವರ್ಷಗಳಿಂದ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸುತ್ತಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಅಪೂರ್ಣ, ಅವಧಿ ಮೀರಿದ ತಪ್ಪು ಮಾಹಿತಿ ಅಥವಾ ನಿಗದಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು. ಅರ್ಜಿದಾರರು ಬೇರೆ ಇಲಾಖೆಯಿಂದ ತರಬೇತಿ ಭತ್ಯೆ ಪಡೆಯುತ್ತಿದ್ದಲ್ಲಿ ಅರ್ಹರಿರುವುದಿಲ್ಲ. ಅರ್ಜಿದಾರರು ಸ್ಥಳೀಯ ಸಂಸ್ಥೆ ಹಾಗೂ ಸೊಸೈಟಿ, ಗ್ರಾಮ ಪಂಚಾಯಿ, ಜಿಲ್ಲಾ ಪಂಚಾಯಿತಿ ಹಾಗೂ ಯಾವುದೇ ಸದಸ್ಯರಾಗಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.