i
ಕೃಷಿ ಇಲಾಖೆ ಜಂಟಿ ನಿರ್ದೇಶಕರ ಮನೆ ಸೇರಿ ವಿವಿಧ 6 ಕಡೆಗಳಲ್ಲಿ ಲೋಕಾಯುಕ್ತ ದಾಳಿ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದ್ದು ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದೆ.
ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಪತ್ತೆ ಮಾಡಿದ್ದಾರೆ.
ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ತುಮಕೂರು ಜಿಲ್ಲೆ ಕೃಷಿ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕೆಲಸ ಮಾಡುವ ಕೆ.ಎಚ್ ರವಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಅವರಿಗೆ ಸಂಭಂದಪಟ್ಟ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ವಶ ಪಡಿಸಿದ್ದಾರೆ.
ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಅವರಿಗೆ ಸಂಬಂಧಿಸಿದ ರಾಮನಗರ ಜಿಲ್ಲೆಯ 4 ಕಡೆ ತುಮಕೂರು ಜಿಲ್ಲೆಯಲ್ಲಿ ಎರಡು ಕಡೆ ಮನೆ ಹಾಗೂ ಫಾರಂ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ತುಮಕೂರು ಕೃಷಿ ಇಲಾಖೆಯಲ್ಲಿ ಜೆಡಿ ಆಗಿ ಕೆಲಸ ನಿರ್ವಹಿಸುತ್ತಿರುವ ಕೆ.ಎಚ್ ರವಿ ತುಮಕೂರು ನಗರದ ಶಂಕರಪುರದಲ್ಲಿ ತುಮಕೂರಿನ ಮನೆ ಹಾಗೂ ರಾಮನಗರದ ಫಾರಂ ಹೌಸ್ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ.