i
ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ…
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟಿ ಮುಂದುವರೆಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾಧರ್ ಅವರಿಗೆ ಸಂಬಂಧಿಸಿದ ಆಸ್ತಿ ಪಾಸ್ತಿ, ಮನೆ ಸೇರಿದಂತೆ ಪೆಟ್ರೋಲ್ ಬಂಕ್ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಚಿಕ್ಕಮಗಳೂರಿನ ಜಯನಗರ ಬಡಾವಣೆಯಲ್ಲಿ ಇರುವ ಗಂಗಾಧರ್ ಮನೆ, ರಾಮನಹಳ್ಳಿಯಲ್ಲಿರು ಪೆಟ್ರೋಲ್ ಬಂಕ್ ಮೇಲೆ ಲೋಕಾ ಟೀಂ ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.