i
ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಅತಿಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.
ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಆಗಲಿದೆ ಹಾಗೂ ಅಲ್ಲಲ್ಲಿ ಭಾರಿ ಮಳೆ ಬೀಳಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಆದರೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.