i
ಭಾರತ್ ಎಲೆಕ್ಟ್ರಾನಿಕ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಜೂನ್ ನಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಿದ್ದು ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ದಿನಾಂಕ: 28-06-2023 ದಿಂದ ಆರಂಭವಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-ಜುಲೈ-2023 ಆಗಿದೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಯಲ್ಲಿ ಖಾಲಿ ಇರುವ 23 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳು. ಉದ್ಯೋಗ ಸ್ಥಳ: ಕವರತಿ – ಬೆಂಗಳೂರು – ಕೊಚ್ಚಿ – ಗಾಂಧಿನಗರ.
ವೇತನ: 40000-55000 ರೂ. ಪ್ರತಿ ತಿಂಗಳು.
ಶೈಕ್ಷಣಿಕಅರ್ಹತೆ:BEL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಬಿಇ ಅಥವಾ B.Tech, B.Sc ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ವಯೋಮಿತಿ:ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಜುಲೈ-2023 ರಂತೆ 32 ವರ್ಷಗಳು.
ವಯೋಮಿತಿ ಸಡಿಲಿಕೆ: SC/ST ಅಭ್ಯರ್ಥಿಗಳು: 05 ವರ್ಷಗಳು
OBC ಅಭ್ಯರ್ಥಿಗಳು: 03 ವರ್ಷಗಳು, PwBD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ-SC/ST/PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ
ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳು: 472 ರೂ.
ಪಾವತಿವಿಧಾನ: ಚಲನ್, ಆಯ್ಕೆಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ.
ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ DM (HR/NS), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು – 560013 ಇಲ್ಲಿಗೆ 12-ಜುಲೈ-2023 ಅಥವಾ ಮೊದಲು ಕಳುಹಿಸಬೇಕಾಗುತ್ತದೆ.