i
“ಕೃಷಿ ಪಂಡಿತ” ಪ್ರಶಸ್ತಿಗಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ ಮತ್ತು ರೈತ ಮಹಿಳೆಯರಿಂದ 2023-24ನೇ ಸಾಲಿನ “ಕೃಷಿ ಪಂಡಿತ” ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 24ನೇ ಜುಲೈ 2023 ರಂದು ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ನಮೂನೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು, ಸ್ಪರ್ಧಿಸಲು ಅರ್ಹತೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ.