i
ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದು ವರಿಷ್ಠರಿಗೆ ಬಿಟ್ಟಿದ್ದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದು ವರಿಷ್ಠರಿಗೆ ಬಿಟ್ಟಿದ್ದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ. ಈಗಾಗಲೇ ಕುಮಾರಸ್ವಾಮಿಯವರು ಕೆಲವೊಂದಿಷ್ಟು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದು ತಿಳಿಸಿದರು.
ವಿಪಕ್ಷ ನಾಯಕನ ಸ್ಥಾನ ಜುಲೈ 18 ರ ನಂತರಘೋಷಣೆ ಆಗಬಹುದು ಎಂಬ ಮಾಹಿತಿ ಇದೆ ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು.