i
ಬಿಜೆಪಿ-ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸಲು ಅವಕಾಶ ಕೋರಿ ಪತ್ರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿಯ 10 ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಮಾನತುಗೊಳಿಸಿರುವುದರ ವಿರುದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವಿಶ್ವಾಸ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಸಲ್ಲಿಸಿದ್ದಾರೆ.
ಈ ಪತ್ರ ಸಲ್ಲಿಕೆಗೂ ಮೊದಲು ಬಿಜೆಪಿಯ ಹತ್ತು ಜನ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಅಮಾನತು ಮಾಡಿರುವ ಸ್ಪೀಕರ್ ಯು.ಟಿ. ಖಾದರ್ ಆದೇಶ ಖಂಡಿಸಿ ಬಿಜೆಪಿ ಸದಸ್ಯರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.