i
ಶಿಕ್ಷಣ ಇಲಾಖೆ ಡಿಡಿಪಿಐ, ಎಸ್ಡಿಎ ಲೋಕಾಯುಕ್ತ ಬಲೆಗೆ…
ಚಂದ್ರವಳ್ಳಿ ನ್ಯೂಸ್, ಹಾವೇರಿ:
ನಿವೃತ್ತ ಶಿಕ್ಷಕನಿಂದ ಹಣದ ಬೇಡಿಕೆಯಿಟ್ಟಿದ್ದ ಡಿಡಿಪಿಐ ಹಾಗೂ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಹಾವೇರಿ ನಗರದಲ್ಲಿ ನಡೆದಿದೆ.ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ದ್ವಿತೀಯ ದರ್ಜೆ ಸಹಾಯಕ ದತ್ತಾತ್ರೇಯ ಕುಂಟೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ರಟ್ಟಿಹಳ್ಳಿಯ ಸರ್ಕಾರಿ ಉರ್ದು ಶಾಲೆಯ ನಿವೃತ್ತ ಶಿಕ್ಷಕ ಮಹಮ್ಮದ್ ಗೌಸ್ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.
ನಿವೃತ್ತಿ ವೇತನ ಸೌಲಭ್ಯ ಪಡೆಯಲು ಸಲ್ಲಿಸುವ ಪೈಲ್ನ್ನು ಎಜೆ ಆಫೀಸ್ಗೆ ಕಳಿಸಲು ಲಂಚಕ್ಕೆ ಬೇಡಿಕೆಯಿಡಲಾಗಿದ್ದು ಈ ಸಂಬಂಧ 7 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚದ ಹಣ ಸಮೇತ ಬಂಧಿಸಿದ್ದಾರೆ.ಡಿಡಿಪಿಐ ಅಂದಾನಪ್ಪ ವಡಗೇರಿ ಅವರ ಗದಗ ಹಾಗೂ ಹಾವೇರಿ ನಿವಾಸದಲ್ಲಿ ಲೋಕಾಯುಕ್ತರು ಪರಿಶೀಲನೆ ಮುಂದುವರೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು.