i
ಹಾಲಿನ ದರ ಹೆಚ್ಚಳಕ್ಕೆ ಮಹತ್ವದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿ ಹಾಲಿನ ದರ ಹೆಚ್ಚಳ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಕೆಎಂಎಫ್ ನಿರ್ದೇಶಕ ಹೆಚ್.ಡಿ.ರೇವಣ್ಣ, ಮಾಲೂರು ಶಾಸಕ ನಂಜೇಗೌಡ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಇನ್ನಿತರರು ಸಭೆಯಲ್ಲಿ ಹಾಜರಿದ್ದರು.