i
ಸಬ್ ಇನ್ಸ್ಪೆಕ್ಟರ್ ನೇಮಕಾತಿಗಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಹಾಗೂ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಯು ನವೆಂಬರ್ 2023ರಲ್ಲಿ ನಡೆಯಲಿದ್ದು, ಪರೀಕ್ಷೆಯ ನಿಗಧಿತ ದಿನಾಂಕವನ್ನು SSC ವೆಬ್ಸೈಟ್ www.ssckkkr.kar.nic.in ಮತ್ತು https://ssc.nic.in ನಲ್ಲಿ ಲಭ್ಯವಿದೆ.
ಅರ್ಜಿ ಸಲ್ಲಿಸುವವರು ವಿದ್ಯಾರ್ಹತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿಯನ್ನುhttps://ssc.nic.in ಲಿಂಕ್ನಲ್ಲಿ ಆಗಸ್ಟ್ 15 ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ 080-25502520 ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್ಎಸ್ಸಿ ಮುಖ್ಯ ಕಚೇರಿ ನವದೆಹಲಿಯ ವೆಬ್ಸೈಟ್ https://ssc.nic.in ಮತ್ತು ಎಸ್ಎಸ್ಸಿ ಕರ್ನಾಟಕ-ಕೇರಳ ಪ್ರದೇಶದ ವೆಬ್ಸೈಟ್ www.ssckkr.kar.nic.in ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.