i
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿ-ಆಧಾರ್ ಇ-ಕೆವೈಸಿ ಮಾಡಿಸಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಡಿತರ ಚೀಟಿ-ಆಧಾರ್ ಇ-ಕೆವೈಸಿ ಮಾಡಿಸದ ಬಹಳಷ್ಟು ಅರ್ಜಿಗಳಿವೆ. ಪಡಿತರ ಚೀಟಿಯೊಂದಿಗೆ ಆಧಾರ್ ಇ-ಕೆವೈಸಿ ಆಗಿರದ ಕಾರಣ ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯಾಗುತ್ತಿಲ್ಲ. ಪಡಿತರ ಚೀಟಿಯೊಂದಿಗೆ ಆಧಾರ್ ಇ-ಕೆವೈಸಿ ಮಾಡಲು ಸಂಬಂದ ಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಸೌಲಭ್ಯವಿದ್ದು ಪಡಿತರ ಚೀಟಿದಾರರು ಕೂಡಲೇ ಇಕೆವೈಸಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ಸಾರ್ವಜನಿಕರು ತಾಲೂಕು ಕೇಂದ್ರ, ಕಂಪ್ಯೂಟರ್ ಸೆಂಟರ್ ಅಥವಾ ತಾಲೂಕು ಕಚೇರಿಗಳಿಗೆ ಅಲೆದಾಡದೆ, ಸಂಬಂದ ಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ, ಆಧಾರ್ ನಂಬರ್ ನೀಡುವುದರೊಂದಿಗೆ, ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
ಇನ್ನೂ ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ವಿವರದಲ್ಲಿ, ಪುರಷರ ಹೆಸರಿನಿಂದ ಮಹಿಳೆಯರ ಹೆಸರಿಗೆ ಬದಲಾಯಿಸಲು ಅವಕಾಶವಿದೆ. ಆಹಾರ ಶಿರಸ್ತೇದಾರ್ ಅವರಿಗೆ ಅರ್ಜಿ ಸಲ್ಲಿಸುವುದರ ಮೂಲಕ ಕುಟುಂಬದ ಮುಖ್ಯಸ್ಥರ ವಿವರವನ್ನು ಬದಲಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.