i
ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಕಲ ಸಿದ್ದತೆ-ಸಿಎಂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಡ ಹಬ್ಬ ಮೈಸೂರು ದಸರಾ – 2023 ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು.
ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ಅಚ್ಚುಕಟ್ಟಾಗಿ ಯಾವುದೇ ಲೋಪ ಆಗದಂತೆ ಅದ್ಧೂರಿಯಾಗಿ ಆಚರಣೆ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.
ಮೈಸೂರು ದಸರಾ ಉತ್ಸವ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹಾದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್, ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.