i
ಹಿರಿಯೂರು ಹೆದ್ದಾರಿ ಪಕ್ಕದ ಅನಧಿಕೃತ ಹೋಟೆಲ್, ಗೂಡು ಅಂಗಡಿ ತೆರವುಗೊಳಿಸಿ-ಡಿಸಿ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರಿನ ಬೈ ಪಾಸ್ ರಸ್ತೆಯಲ್ಲಿ ಬಹಳಷ್ಟು ಜನರು ಅನಧಿಕೃತವಾಗಿ ಹೋಟೆಲ್, ಡಾಬಾ ಹಾಗೂ ಗೂಡು ಅಂಗಡಿಗಳನ್ನು ತೆರದಿದ್ದು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪೊಲೀಸರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಸ್ಥಳಗಲ್ಲಿ ಲಾರಿಗಳು ನಿಂತು ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನಗರ ಸಭೆಯಿಂದ ಪರವಾನಿಗೆ ಪಡೆದೇ, ಹೆದ್ದಾರಿ ಪ್ರಾಧಿಕಾರದ ಜಾಗದಲ್ಲಿ ಹೋಟೆಲ್, ಅಂಗಡಿ ನೆಡಸುತ್ತಿರುವರನ್ನು ಕೂಡಲೇ ಅಲ್ಲಿಂದ ತೆರವುಗೊಳಿಸಬೇಕು. ಬೆಸ್ಕಾಂ ಅಧಿಕಾರಿಗಳು ತಕ್ಷಣವೇ ಅನಧಿಕೃತ ಹೋಟೆಲ್ ಹಾಗೂ ಅಂಗಡಿಗಳಿಗೆ ನೀಡಿದ ವಿದ್ಯುತ್ ಸಂಪರ್ಕ ಕಡಿತಗೊಳಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿಆರ್.ಜೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಹೆದ್ದಾರಿ, ನಗರ ರಸ್ತೆಗಳಲ್ಲಿ ಸೂಚನಾ ಫಲಕಗಳ ಅವಳವಡಿಕೆ ಕುರಿತು, ಅಪಘಾತ ವಲಯದ ಕಪ್ಪು ಸ್ಥಳಗಳು, ರೈಲ್ವೇ ಓವರ್ ಬ್ರಿಡ್ಜ್ ಕೆಳಭಾಗದಲ್ಲಿ ನೀರು ನಿಲ್ಲದಂತೆ ಕಾಮಗಾರಿ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಲೋಕಪಯೋಗಿ ಕಾರ್ಯಪಾಲಕ ಅಭಿಯಂತರ ಪಿ.ಎಸ್.ಮಲ್ಲಿಕಾರ್ಜುನ್, ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಗೌರವ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುಥೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ರಂಗನಾಥ್, ಹೆದ್ದಾರಿ ಸುರಕ್ಷಾ ಅಧಿಕಾರಿ ನವೀನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.